ಬೆಂಗಳೂರು ಜಲ ಮಂಡಳಿ ನೇಮಕಾತಿ ಅಧಿಸೂಚನೆಯಲ್ಲಿ ಕೆಲವು ಬದಲಾವಣೆ

Share

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗ್ರೂಪ್ ಬಿ ತಾಂತ್ರಿಕ  ಗ್ರೂಪ್ ಸಿ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇಮಕಕ್ಕೆ ಹೊರಡಿಸಿದ್ದ ಅಧಿಸೂಚನೆಗೆ ಕೆಲವು ಬದಲಾವಣೆ ಮಾಡಲಾಗಿದೆ.

ಉನ್ನತ ಹುದ್ದೆಗೆ ಅರ್ಜಿ ಸಲ್ಲಿಸಿರುವ ಬಿ ಡಬ್ಲ್ಯೂ ಎಸ್ ಎಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ನೌಕರರು ಈಗಿನ ಹುದ್ದೆಯಲ್ಲಿ ಮೂರು ವರ್ಷ ಅಥವಾ ಅದಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ್ದಲ್ಲಿ ಸೇವಾ ಅವಧಿಯನ್ನು ಆದರಿಸಿ 10 ವರ್ಷದವರೆಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ ಎಂದು ತಿದ್ದುಪಡಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮಾಪನ ಓದುಗ ಹುದ್ದೆಯ ವಿದ್ಯಾರ್ಥಿ ಯಲ್ಲಿಯೂ ಬದಲಾವಣೆ ಮಾಡಲಾಗಿದ್ದು ಒಂದು ವರ್ಷದ ಕಂಪ್ಯೂಟರ್ ಕೋರ್ಸ್ ಮಾಡಿದವರು ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಹಿಂದಿನ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ, ಈಗ ಆರು ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿದವರು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಬದಲಾವಣೆಯನ್ನು ಹೊರತುಪಡಿಸಿ ಇಂದಿನ ಅಧಿಸೂಚನೆಯಲ್ಲಿ ಮತ್ಯಾವ ಬದಲಾವಣೆಗಳನ್ನು ಮಾಡಲಾಗಿಲ್ಲ ಎಂದು ಬಿಡಬ್ಲ್ಯೂಎಸ್ಎಸ್ ಸ್ಪಷ್ಟಪಡಿಸಿದೆ ಗಳು ಸೆಪ್ಟೆಂಬರ್ 27 ಕೊನೆ ದಿನಾಂಕವಾಗಿದೆ

You may also like ->

//