ಲೋಕಾಯುಕ್ತದಲ್ಲಿ ಶೀಘ್ರಲಿಪಿಗಾರರ ನೇಮಕಾತಿ -2019

Share

Starts : 11-Jun-2019End : 13-Jul-2019

ಲೋಕಾಯುಕ್ತದಲ್ಲಿ ಶೀಘ್ರಲಿಪಿಗಾರರ ನೇಮಕಾತಿ -2019
ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಶೀಘ್ರಲಿಪಿಗಾರರ ಹುದ್ದೆಗಳ ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜುಲೈ 13 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
 
ಒಟ್ಟು ಹುದ್ದೆಗಳು - 13

 

ಹುದ್ದೆಯ ಹೆಸರು
ಶೀಘ್ರಲಿಪಿಗಾರ - 13
ವಿದ್ಯಾರ್ಹತೆ
ಅಭ್ಯರ್ಥಿಗಳು ಪದವಿ ಪೂರ್ವ ಶಿಕ್ಷಣ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ವ್ಯಾಸಂಗ ಪೂರ್ಣಗೊಳಿಸಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಅಂಗ್ಲ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆ ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್‌ ಪ್ರಾಕ್ಟೀಸ್‌ನ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳ ತೇರ್ಗಡೆ ಹೊಂದಿರಬೇಕು.
 
ವಯೋಮಿತಿ
ಕನಿಷ್ಠ -  18 ವರ್ಷಗಳು
ಗರಿಷ್ಠ - 35 ವರ್ಷಗಳು
2ಎ,2ಬಿ, 3ಎ ಮತ್ತು 3ಬಿ ಗರಿಷ್ಠ ವಯೋಮಿತಿ 38 ವರ್ಷ.
ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ-1 ಗರಿಷ್ಠ ವಯೋಮಿತಿ 40 ವರ್ಷ.
 
ವೇತನ ಶ್ರೇಣಿ
27,650-650-29,600-750-32,600-850-36000-950-39800-1100-46400-1250-52650 ರೂ.
 
ಅರ್ಜಿ ಶುಲ್ಕ
ಅಭ್ಯರ್ಥಿಗಳೂ 300 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯ್ತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಸಮಯದಲ್ಲಿ ಕ್ರಾಸ್‌ ಮಾಡಿದ ಡಿಡಿ ಅಥವಾ ಇಂಡಿಯನ್‌ ಪೋಸ್ಟಲ್‌ ಆರ್ಡರನ್ನು 'ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು' ಹೆಸರಿಗೆ ಸಂದಾಯವಾಗುವಂತೆ ಪಡೆದು ಅರ್ಜಿಯ ಜತೆಗೆ ಲಗತ್ತಿಸಿರಬೇಕು.
 
ಸೂಚನೆ
ಹೈದರಾಬಾದ್‌ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಒಂದು ಹುದ್ದೆಯನ್ನು ಮೀಸಲಿಡಲಾಗಿದೆ.
 
ಅರ್ಜಿ ಸಲ್ಲಿಸಲು ವಿಳಾಸ
ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್‌. ಅಂಬೇಡ್ಕರ್‌ ವೀದಿ, ಬೆಂಗಳೂರು-560001.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :11/06/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :13/07/2019
 
ವಿವರವಾದ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಪ್ರಕಟಣೆ ಪಿಡಿಎಫ್ ಅನ್ನು ವೀಕ್ಷಿಸಿ
 
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 Notification
 Application Form
 
 
 

You may also like ->

//