ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ 2019

Share

Starts : 27-Jun-2019End : 27-Jul-2019

ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ 2019
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು
ಆನ್‌ಲೈನ್ ಮೂಲಕ ಜುಲೈ 27,2019 ರ ಸಂಜೆ 5:30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
 
ಹುದ್ದೆಯ ಹೆಸರು
ಗ್ರಾಮಲೆಕ್ಕಾಧಿಕಾರಿ
 
ವಿದ್ಯಾರ್ಹತೆ
ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
 
ವಯೋಮಿತಿ
ಕನಿಷ್ಠ -  18 ವರ್ಷಗಳು
ಗರಿಷ್ಠ - 40 ವರ್ಷಗಳು
ವಯೋಮಿತಿ ಸಡಿಲಿಕೆ - ವಿಧವೆ / ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸಶಸ್ತ್ರ ದಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವವರೋ ಅದಕ್ಕೆ 3ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
 
ಆಯ್ಕೆ ವಿಧಾನ
ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.
 
ಅರ್ಜಿ ಶುಲ್ಕ
ಪರಿಶಿಷ್ಟ ಪಂಗಡ,ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ.100/-ರೂ ಗಳನ್ನು ಜಿಲ್ಲಾಧಿಕಾರಿಗಳು,ಚಿಕ್ಕಬಳ್ಳಾಪು ಜಿಲ್ಲೆ ರವರ State Bank of india, Chikkaballapur ಶಾಖೆಯಲ್ಲಿನ ಉಳಿತಾಯ ಖಾತೆ: 64030323576 ಗೆ (IFSC Code SBIN 0040082) ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮುಂಚೆ ಪಾವತಿ ಮಾಡಿ ಚಲನ್ ಸಂಖ್ಯೆಯನ್ನು ಅರ್ಜಿಯಲ್ಲಿ ದಿನಾಂಕದ ಸಹಿತ ತಪ್ಪದೇ ನಮೂದಿಸುವುದು. ಆನ್‌ಲೈನ್ ಮೂಲಕ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಜುಲೈ 28,2019ಕೊನೆಯ ದಿನವಾಗಿರುತ್ತದೆ.

 

ವೇತನ ಶ್ರೇಣಿ
ರೂ.21,400/- ರಿಂದ 42,000/-.

 

ಜಾಬ್ ಸ್ಥಳ - ಚಿಕ್ಕಬಳ್ಳಾಪುರ 

 

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :27/06/2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :27/07/2019
 
ವಿವರವಾದ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಪ್ರಕಟಣೆ ಪಿಡಿಎಫ್ ಅನ್ನು ವೀಕ್ಷಿಸಿ
 
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
 
 Website
 
 Notification
 
 
 
 
 

You may also like ->

//